Site icon PowerTV

ಹೆಣ್ಣು ಮಗುವಿಗೆ ತಂದೆಯಾದ ಧ್ರುವ ಸರ್ಜಾ

ಸ್ಯಾಂಡಲ್​ವುಡ್​ ಆ್ಯಕ್ಟರ್​ ಧ್ರುವ ಸರ್ಜಾ ಅವರು ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಬೆಂಗಳೂರಿನ ಬನಶಂಕರಿ ಅಕ್ಷ ಆಸ್ಪತ್ರೆಯಲ್ಲಿ ಅವರ ಪತ್ನಿ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿರುವ ಧ್ರುವ ಸರ್ಜಾ, ತಾಯಿ- ಮಗು ಆರೋಗ್ಯವಾಗಿದ್ದಾರೆ. ಪತ್ನಿಗೆ ನಾರ್ಮಲ್ ಡೆಲಿವರಿ ಆಗಿದೆ ಎಂದು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಧ್ರುವ ಸರ್ಜಾ ಪತ್ನಿ ಪ್ರೇರಣಾ ನಿನ್ನೆ ಆಸ್ಪತ್ರಗೆ ದಾಖಲಾಗಿದ್ದು, ನಾರ್ಮಲ್​ ಡೆಲಿವರಿ ಆಗಿದೆ. ಇನ್ನು ಧ್ರುವ ಅವರಿಗೆ ಹೆಣ್ಣು ಮಗು ಬೇಕೆಂಬ ಆಸೆ ಇತ್ತು. ಅದರಂತೆಯೇ ಅವರು ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಅಣ್ಣನ ಮಗನೇ ನಮ್ಮ ಮಗ ನಮಗೆ ಹೆಣ್ಣು ಮಗು ಬೇಕು ಎಂದು ಈ ಹಿಂದೆ ಧ್ರುವ ಹೇಳಿದ್ದರು. ಈಗ ಅವರ ಆಸೆಯಂತೆಯೇ ಅವರಿಗೆ ಹೆಣ್ಣು ಮಗುವಾಗಿದೆ.

ಇನ್ನು, 2019 ರಲ್ಲಿ ಧ್ರುವ ಸರ್ಜಾ ಬಾಲ್ಯದ ಗೆಳೆತಿ ಪ್ರೇರಣಾರನ್ನು ವಿವಾಹವಾಗಿದ್ದರು. ಈ ಶುಭ ಸಮಾರಂಭದ ಬೆನ್ನಲ್ಲೇ, ಅಂದರೆ 2020ರಲ್ಲಿ ಸರ್ಜಾ ಕುಟುಂಬದಿಂದ ಚಿರಂಜೀವಿ ಸರ್ಜಾ ಅಗಲಿದ್ದರು. ಇದಾದ ಬಳಿಕ ಸರ್ಜಾ ಕುಟುಂಬದಲ್ಲಿ ಯಾವುದೇ ಮಹತ್ವದ ಶುಭ ಸಮಾರಂಭ ನಡೆದಿರಲಿಲ್ಲ. ಇದೀಗ ಧ್ರುವ ಸರ್ಜಾ ದಂಪತಿಗಳ ಮೂಲಕ ಮತ್ತೊಮ್ಮೆ ಕುಟುಂಬದಲ್ಲಿ ಸಂತಸ ಮನೆ ಮಾಡಿರುವುದು ವಿಶೇಷ.

Exit mobile version