Site icon PowerTV

ಮುಲಾಯಂ ಸಿಂಗ್ ಯಾದವ್ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ.!

ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ಉಸಿರಾಟ ಕ್ರಿಯೆಯಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ್‌ದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್(82) ಅವರರಿಗೆ ಹಲವು ದಿನಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಸ್ಥಿತಿ ಗಂಭೀರವಾದ ನಂತರ ಅವರನ್ನು ಐಸಿಯು ವಾರ್ಡ್​ಗೆ ಸ್ಥಳಾಂತರಿಸಲಾಗಿದೆ.

ಮುಲಾಯಂ ಸಿಂಗ್ ಯಾದವ್ ಅವರಿಗೆ ವೈದ್ಯ ಡಾ ಸುಶೀಲಾ ಕಟಾರಿಯಾ ಅವರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ಹೇಳಿವೆ.

Exit mobile version