Site icon PowerTV

ಪರ್ವತದಲ್ಲಿ ಹಿಮಕುಸಿತ : 10 ಮಂದಿ ಸಾವು

ಉತ್ತರಾಖಂಡದ ದ್ರೌಪದಿಯ ದಂಡ-2 ಪರ್ವತ ಶಿಖರದಲ್ಲಿ ಹಿಮಕುಸಿತ ಸಂಭವಿಸಿದ್ದು, ನೆಹರು ಪರ್ವತಾರೋಹಣ ಸಂಸ್ಥೆಯ ಪರ್ವತಾರೋಹಿಗಳು ಸಿಲುಕಿದ್ದಾರೆ.

ಇವರಲ್ಲಿ 10 ಮಂದಿ ಸಾವಿಗೀಡಾಗಿದ್ದು 8 ಮಂದಿಯನ್ನು ರಕ್ಷಿಸಲಾಗಿದೆ. ಜಿಲ್ಲಾಡಳಿತದಿಂದ ತ್ವರಿತ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಎನ್​​ಡಿ ಆರ್​​ಎಫ್, ಎಸ್​​ಡಿಆರ್​​ಎಫ್, ಸೇನೆ ಮತ್ತು ಐಟಿಬಿಪಿ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದಾರೆ.

ನಾನು ರಕ್ಷಣಾ ಸಚಿವರ ಜತೆ ಮಾತನಾಡಿದ್ದು, ತ್ವರಿತ ರಕ್ಷಣಾ ಕಾರ್ಯಾಚರಣೆಗಾಗಿ ಸೇನಾಪಡೆಯ ಸಹಾಯ ಕೇಳಿರುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. ಎಲ್ಲರನ್ನೂ ರಕ್ಷಿಸಲು ಪ್ರಯತ್ನಿಸುತ್ತೇವೆ ಎಂದು ಧಾಮಿ ಹೇಳಿದ್ದಾರೆ. ಐಎಎಫ್ ಎರಡು ಚೀತಾ ಹೆಲಿಕಾಪ್ಟರ್ ಗಳನ್ನು ನಿಯೋಜಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Exit mobile version