Monday, August 25, 2025
Google search engine
HomeUncategorizedನವರಾತ್ರಿ ಪೂಜೆ ನೆರವೇರಿಸಿದ ರಾಜವಂಶಸ್ಥ ಯದುವೀರ್

ನವರಾತ್ರಿ ಪೂಜೆ ನೆರವೇರಿಸಿದ ರಾಜವಂಶಸ್ಥ ಯದುವೀರ್

ಮೈಸೂರು : ವಿಶ್ವವಿಖ್ಯಾತ ಮೈಸೂರು ಅರಮನೆ ಅಂಗಳದಲ್ಲಿ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿತ್ತು.ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸತತ 7ನೇ ಬಾರಿ ನವರಾತ್ರಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ್ರು.

ಆಯುಧ ಪೂಜೆ ಹಿನ್ನೆಲೆಯಲ್ಲಿ ಮುಂಜಾನೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಮತ್ತು ಪಟ್ಟದ ಕತ್ತಿ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಆಗಮಿಸಿದ್ವು. ಪೂಜೆ ಬಳಿಕ ಖಾಸಾ ಆಯುಧಗಳನ್ನು ಮೆರವಣಿಗೆಯಲ್ಲಿ ಅರಮನೆಗೆ ಕೊಂಡೊಯ್ಯಲಾಯ್ತು.

ಪ್ರತಿ ವರ್ಷದಂತೆ ಅರಮನೆಯ ಕಲ್ಯಾಣ ಮಂಟಪದಲ್ಲಿ ಚಂಡಿಕಾ ಹೋಮ ನೆರವೇರಿತು. ಮುಂಜಾ‌ನೆ 5.30ರಿಂದಲೇ ಅರಮನೆಯಲ್ಲಿ ಪೂಜಾ ವಿಧಾನಗಳು ಆರಂಭಗೊಂಡಿದ್ದವು. ಖಾಸಾ ಆಯುಧಗಳಿಗೆ ಪೂಜೆ ನೆರವೇರಿಸಿ ಕಲ್ಯಾಣ ಮಂಟಪದಿಂದ ಸವಾರಿ ತೊಟ್ಟಿಗೆ ಆಗಮಿಸಿದ್ರು.ಈ ವೇಳೆ ಕಾಯ್ವೋ ಶ್ರೀ ಗೌರಿ ಎನ್ನುವ ಮೈಸೂರು ಸಂಸ್ಥಾನ ಗೀತೆಯನ್ನು ಪೊಲೀಸ್ ಬ್ಯಾಂಡ್​ನವರು ನುಡಿಸಿದ್ರು. ಯದುವೀರ್ ಗೌರವ ವಂದನೆ ಸ್ವೀಕರಿಸಿದ್ರು.

ಪಟ್ಟದ ಆನೆ ಧನಂಜಯ, ನಿಶಾನೆ ಆನೆ ಭೀಮ, ಪಟ್ಟದ ಹಸು, ಪಟ್ಟದ ಕುದುರೆ, ಪಟ್ಟದ ಒಂಟೆ, ರಾಜವಂಶಸ್ಥರು ಬಳಸುವ ವಾಹನಗಳು ಸಾಲಾಗಿ ಸಾಗಿದವು.ಯದುವೀರ್ ಅವರು ಸಾಂಕೇತಿಕವಾಗಿ ಪುಷ್ಪಾರ್ಚನೆ ಮಾಡುವ ಮೂಲಕ ಪೂಜಾ ವಿಧಿವಿಧಾನ ಮುಗಿಸಿದ್ರು.ಮೊಮ್ಮಗ ಆದ್ಯಾ ಯದುವೀರ್ ಅವರನ್ನು ತೊಡೆಯ ಮೇಲೆ ಕೂರಿಸಿಕೊಂಡು ಪ್ರಮೋದಾ ದೇವಿ ಒಡೆಯರ್ ಅವರು ಪೂಜೆ ಮಾಡುವುದನ್ನು ವೀಕ್ಷಣೆ ಮಾಡಿದ್ರು.ಆದರೆ,ತ್ರಿಷಿಕಾ ಕುಮಾರಿ ಸಿಂಗ್ ಅನುಪಸ್ಥಿತಿ ಇತ್ತು.

ಇನ್ನೂ ಪ್ರತಿ ವರ್ಷದಂತೆ ಈ‌ ವರ್ಷವೂ ಸಹ ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ಅರಮನೆಗೆ ಬಂದಿರುವ ಆನೆಗಳ ಮಾವುತರು, ಕಾವಾಡಿಗಳಿಗೆ ಉಪಹಾರ ಕೂಟ ಆಯೋಜನೆ ಮಾಡಿದ್ರು. ಸ್ವತಹ ತಾವೇ ಉಪಹಾರ ಬಡಿಸುವ ಮೂಲಕ ಚಾಲನೆ ನೀಡಿದ್ರು. ನಂತರ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜೊತೆ ದಸರಾ ಆನೆಗಳಿಗೆ ಪೂಜೆ ಸಲ್ಲಿಸಿದರು.

ಒಟ್ಟಾರೆ ಸಾಂಸ್ಕೃತಿಕ ನಗರಿಯಲ್ಲಿ ಆಯುಧಪೂಜೆಯ ಸಂಭ್ರಮ ಮನೆ ಮಾಡಿತ್ತು. ಬುಧವಾರ ವಿಶ್ವವಿಖ್ಯಾತ ಜಂಬೂ ಸವಾರಿಗೆ ಅರಮನೆಯಲ್ಲಿ‌ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ.

ಸ್ವಾತಿ ಪುಲಗಂಟಿ ಹಾಗೂ ಸುರೇಶ್ ಪವರ್ ಟಿವಿ ಮೈಸೂರು

RELATED ARTICLES
- Advertisment -
Google search engine

Most Popular

Recent Comments