Site icon PowerTV

ವೇಗವಾಗಿ ಬಂದು ಆ್ಯಂಬುಲೆನ್ಸ್​ಗೆ ಕಾರು ಡಿಕ್ಕಿ, 5 ಸಾವು

ಮುಂಬೈ: ಬೆಳ್ಳಂ ಬೆಳಿಗ್ಗೆ ಕಾರುಗಳು ಮತ್ತು ಆಂಬ್ಯುಲೆನ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 5 ಜನರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್‌ನಲ್ಲಿ ನಡೆದಿದೆ.

ಇಂದು ನಸುಕಿನ ಜಾವ 3:30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಈ ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ವೇಗವಾಗಿ ಬಂದ ಕಾರೊಂದು ನಿಲ್ಲಿಸಿದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಐವರು ಸಾವನ್ನೊಪ್ಪಿದ್ದಾರೆ.

ಈ ಮೊದಲು ಅದೇ ಸ್ಥಳದಲ್ಲಿ ಎರಡು ವಾಹನಗಳ ನಡುವೆ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲು ರಸ್ತೆ ಬದಿಯಲ್ಲಿ ನಿಲ್ಲಿಸಿ ಇನ್ನೇನು ಆಂಬ್ಯುಲೆನ್ಸ್ ಸ್ಥಳದಿಂದ ಹೊರಡಬೇಕು ಎನ್ನುವಷ್ಟರಲ್ಲಿ ವೇಗದಿಂದ ಬಂದ ಕಾರು ನಿಂತಿದ್ದ 2 ಕಾರ್​ಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಮೂರು ಕಾರುಗಳು ಜಖಂಗೊಂಡಿದ್ದು, ಸ್ಥಳದಲ್ಲೇ ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

Exit mobile version