Site icon PowerTV

ಟೂರಿಸ್ಟ್ ಬಸ್-KSRTC ಬಸ್ ನಡುವೆ ಭೀಕರ ಅಪಘಾತ; 9 ಸಾವು.!

ಕೇರಳ: ಎರ್ನಾಕುಲಂನ ಮುಳಂತುರುತಿಯ ಬಾಸೆಲಿಯಸ್ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ನಿನ್ನೆ ತಡರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ವಡಕ್ಕೆಂಚೇರಿ ಬಳಿಯ ಮಂಗಳಂ ಎಂಬಲ್ಲಿ ನಡೆದಿದೆ.

ಟೂರಿಸ್ಟ್ ಬಸ್ ಕಾರನ್ನು ಓವರ್ ಟೇಕ್ ಮಾಡುವಾಗ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಹಿಂಬದಿಯಲ್ಲಿ ಢಿಕ್ಕಿ ಹೊಡೆದಿದೆ. ಬಳಿಕ ಟೂರಿಸ್ಟ್ ಬಸ್ ನಿಯಂತ್ರಣ ತಪ್ಪಿ ಸಮೀಪದ ಜೌಗು ಪ್ರದೇಶಕ್ಕೆ ಉರುಳಿ ಬಿದ್ದು ಈ ಸಾವುಗಳು ಸಂಭವಿಸಿದೆ.

ಸುಮಾರು 50 ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ. ಪ್ರವಾಸಿ ಬಸ್ ಎರ್ನಾಕುಲಂನ ಬಸೆಲಿಯೋಸ್ ವಿದ್ಯಾನಿಕೇತನ ಹಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳನ್ನು ಹೊತ್ತೊಯ್ದು ಊಟಿಗೆ ಹೊರಟಿತ್ತು. ಈ ವೇಳೆ ದುರ್ಘಟನೆ ನಡೆದಿದೆ.

Exit mobile version