Site icon PowerTV

ನಟ ಅನಂತ್ ನಾಗ್​​’ಗೆ ಇಂದು ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ​.!

ಬೆಂಗಳೂರು: ಹಿರಿಯ ನಟ ಅನಂತ್ ನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ವತಿಯಿಂದ ಇಂದು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.

ಕಲೆ, ಸಿನಿಮಾ‌ ಕ್ಷೇತ್ರದಲ್ಲಿನ‌ ಸಾಧನೆ‌ ಪರಿಗಣಿಸಿ, ನಟ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್‌ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಂತನಾಗ್​ ಅವರಿಗೆ ಗೌರವ್ ಡಾಕ್ಟರೇಟ್​ ಪಶಸ್ತಿ ನೀಡಲಿದೆ.

ಅನಂತನಾಗ್​ ಸಿನಿಮಾ ಹಾಗೂ ರಾಜಕೀಯ ಎರಡು ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದಾರೆ. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್​ ಅವರು ಉಪಸ್ಥಿತರಿರಲಿದ್ದಾರೆ. ಅನಂತ್ ನಾಗ್​ ಅವರು ಮಿಂಚಿನ ಓಟ, ನಾ ನಿನ್ನ ಬಿಡಲಾರೆ ಸೇರಿದಂತೆ ಇತ್ತೀಚಿನ‌ ಮುಂಗಾರು ಮಳೆ, ಗಾಳಿಪಟ ಅಂತಹ ಯಶಸ್ವಿ ಸಿನಿಮಾಗಳನ್ನ ಕನ್ನಡ ಚಿತ್ರರಂಗಕ್ಕೆ ತಂದು ಕೊಟ್ಟಿದ್ದಾರೆ. ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮರಾಠಿ, ಇಂಗ್ಲೀಷ್ ಸೇರಿದಂತೆ ಒಟ್ಟು 150 ಕ್ಕೂ ಅಧಿಕ ಚಿತ್ರಗಳಲ್ಲಿ ಅನಂತ್ ನಾಗ್ ಅಭಿನಯಿಸಿದ್ದಾರೆ.

Exit mobile version