Site icon PowerTV

ಚಿಕಿತ್ಸೆ ಫಲಿಸದೇ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ.!

ಹುಬ್ಬಳ್ಳಿ; ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಮಾಜಿ ಸಿಎಂ ಎಸ್.ಎಮ್ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಜಬ್ಬಾರ್‌ ಖಾನ್ ಹೊನ್ನಳ್ಳಿ ಸೇವೆ ಸಲ್ಲಿಸಿದ್ದರು.

Exit mobile version