Site icon PowerTV

ಕನ್ನಡದಲ್ಲೇ ಪರೀಕ್ಷೆ ನಡೆಸಲು HDK ಆಗ್ರಹ

ಬೆಂಗಳೂರು : ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಟ್ವೀಟ್​ ಮಾಡಿ ಎಚ್ಚರಿಸಿದ್ದಾರೆ.

ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು. ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆಯಾಗಲು ಅನುಕೂಲವಾಗುತ್ತದೆ ಎಂದ್ರು. ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು. ನಮ್ಮ ಬೇಡಿಕೆಗಳು 2 ಇದೆ. ಅದು ಏನೆಂದರೆ, ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು ಎಂದು ಹೇಳಿದರು.

Exit mobile version