Monday, September 8, 2025
HomeUncategorizedಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿದ ಕೇಂದ್ರ ಸರ್ಕಾರ

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿದ ಕೇಂದ್ರ ಸರ್ಕಾರ

ನವದೆಹಲಿ : ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶ ಪ್ರತಿಯಲ್ಲಿ ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ನಾಮಕರಣ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಹಲವು ದಿನಗಳಿಂದ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಎಂಬ ಒತ್ತಾಯ ಕೇಳಿ ಬಂದಿತ್ತು. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ದೆಹಲಿಯಲ್ಲಿ ಭೇಟಿಯಾಗಿ ಸಂಸದರು ಲಿಖಿತ ಮನವಿ ಕೂಡ ಸಲ್ಲಿಸಿದ್ದರು. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಅಪಾರ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡಬೇಕು ಎಂದು ಒತ್ತಾಯಿಸಿದ್ದರು.

ಇದೇ ವೇಳೆ ಮೈಸೂರು-ತಾಳಗುಪ್ಪ ಎಕ್ಸ್‌ ಪ್ರೆಸ್‌ ಹೆಸರು ಸಹ ಬದಲಾವಣೆ ಮಾಡಲಾಗಿದ್ದು, ಕುವೆಂಪು ಎಕ್ಸ್‌ ಪ್ರೆಸ್‌ ಎಂದು ಮರು ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಜುಲೈ 25ರಂದು ಸಂಸದ ಪ್ರತಾಪ್ ಸಿಂಹ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮನವಿಗೆ ಸ್ಪಂದಿಸಿ ಈ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments