ಮಳೆಗೆ ಮಲೆನಾಡಿನಲ್ಲಿ ಹಲವಾರು ಅವಾಂತರ

ಚಿಕ್ಕಮಗಳೂರು :  ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ವರುಣನ ದರ್ಶನವಾಗಿದ್ದು, ಕಳೆದ ಮೂರು ಗಂಟೆಯಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರು, ಮೂಡಿಗೆರೆ ಭಾಗದಲ್ಲೂ ಭಾರಿ ಮಳೆಯಾಗಿದೆ. ಹಳ್ಳ, ಕೊಳ್ಳಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿ ರಸ್ತೆ ಮೇಲೆ ಹರಿದಿದ್ದು, ರಸ್ತೆಯೆಲ್ಲಾ ನದಿಯಂತೆ ಮಾರ್ಪಟ್ಟಿತ್ತು. ಕಡೂರು, ತರೀಕೆರೆ ಭಾಗಗಳಲ್ಲೂ ಸಾಧಾರಣ ಮಳೆಯಾಗಿದೆ.

ಮಲೆನಾಡಿನಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಶಾಲಾ, ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES