ಕಾರು-ಸ್ಕೂಟರ್ ನಡುವೆ ಡಿಕ್ಕಿ, ಬೈಕ್ ಚಾಲಕ ಸಾವು

ಮೈಸೂರು : ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತವಾಗಿ ದೇಗುಲಕ್ಕೆ ಕಾರು ನುಗ್ಗಿದ ಘಟನೆ ಮಂಡ್ಯ ನಗರದ ಕಲ್ಲಹಳ್ಳಿ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯ ಬಿಸಿಲುಮಾರಮ್ಮ ದೇವಸ್ಥಾನದ ಬಳಿ ನಡೆದಿದೆ.

ಕಾರು ಡಿಕ್ಕಿಯಾದ ಪರಿಣಾಮ ಸಿದ್ದಯ್ಯನ ಕೊಪ್ಪಲು ಗ್ರಾಮದ 40 ವರ್ಷದ ಸತೀಶ್ ಎಂಬ ಬೈಕ್ ಚಾಲಕ ಸಾವನ್ನಪ್ಪಿದ್ದಾನೆ. ಬಿಸಿಲುಮಾರಮ್ಮ ದೇಗುಲದ ಕಾಂಪೋಟ್​​​​​ಗೆ ಡಿಕ್ಕಿಯಾಗಿದ್ದು ಆಶ್ಚರ್ಯಕರ ರೀತಿಯಲ್ಲಿ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ದೇಗುಲದ ಕಾಂಪೌಂಡ್ ಹತ್ತಿ ಕಾರ್ ನಿಂತಿದ್ದರಿಂದ್ದ ದೇಗುಲದಲ್ಲಿದ್ದ ಭಕ್ತರು ಕೂಡ ಕೂದಲೆಳೆಯಲ್ಲಿ ಪಾರಾಗಿದ್ದಾರೆ. ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿದ್ದು, ಈ ಸಂಬಂಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಟ್ರಾಫಿಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES