Saturday, August 23, 2025
Google search engine
HomeUncategorizedಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟ್ಯಾಗೇಟ್ ಇನ್ನಿಲ್ಲ

ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟ್ಯಾಗೇಟ್ ಇನ್ನಿಲ್ಲ

ಚಾಮರಾಜನಗರ : ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದ ಹೋರಾಟಗಾರ್ತಿ ಲಲಿತಾ ಟ್ಯಾಗೇಟ್ ವಯೋಸಹಜವಾಗಿ ನಿಧನರಾಗಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದ ಹೋರಾಟಗಾರ್ತಿ. ಲಲಿತ ಟ್ಯಾಗೆಟ್ ಅವರು ಕಳೆದ 5 ರಂದು 91 ರ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಚಾಮರಾಜನಗರದಲ್ಲೇ ಮೃತರ ಅಂತ್ಯಕ್ರಿಯೆ ನಡೆಯಲಿದೆ.

ಇನ್ನು, ಲಲಿತಾ ಟಾಗೆಟ್ ಅವರು ತಮ್ಮ 14 ನೇ ವಯಸ್ಸಿನಲ್ಲಿ ಸ್ವಾತಂತ್ರ್ಯದ ಘೋಷಣೆಗಳಿಂದ ಸ್ಪೂರ್ತಿಗೊಂಡು ಚಳವಳಿಗೆ ಧುಮುಕಿದ್ದರು.‌ ಕುಟುಂಬಸ್ಥರ ಮಾತು ಕೇಳದೆ ಬ್ರಿಟಿಷರ ವಿರುದ್ಧದ ಮೆರವಣಿಗೆಗಳಲ್ಲಿ ಭಾಗವಹಿಸಿ, ಘೋಷಣೆಗಳನ್ನು ಕೂಗಿ ಗಮನ ಸೆಳೆದಿದ್ದರು. ಪ್ರತಿಭಟನೆ, ಮೆರವಣಿಗೆಗಳಲ್ಲಿ ಮುಂದಿರುತ್ತಿದ್ದ ಟಾಗೆಟ್. ಕೆಲವೊಮ್ಮೆ ಪೊಲೀಸರ ಲಾಠಿಗಳನ್ನು ಕಿತ್ತುಕೊಂಡು ಬಿಸಾಡುತ್ತಿದ್ದರಂತೆ.

ಅದಲ್ಲದೇ, ಪೊಲೀಸ್ ಠಾಣೆಗಳ ಬಳಿ ತೆರಳಿ ಅಲ್ಲಿನ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪರಾರಿಯಾಗುತ್ತಿದ್ದ ಟಾಗೆಟ್. ತನ್ನ ತಾಯಿ ಮನೆಯಲ್ಲಿ ಕೂಡಿ ಹಾಕಿದ್ರು ಕೂಡ ಛಾವಣಿ ಹೆಂಚು ಇಳಿಸಿ ಹೊರಹೋಗಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದರು.

RELATED ARTICLES
- Advertisment -
Google search engine

Most Popular

Recent Comments