Site icon PowerTV

ರಾಜ್ಯದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದ್ದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಸೇರಿದಂತೆ ಮುಂದಿನ 4 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ತಮಿಳುನಾಡು ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀವರೆಗೆ ವಿಸ್ತರಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಭಾಗದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ.

Exit mobile version