Site icon PowerTV

ಮುರುಘಾ ಶರಣರಿಗೆ ಶಾಕ್​; ಮತ್ತಿಬ್ಬರು ಸಂತ್ರೆಸ್ತೆಯರು ದೂರು.?

ಮೈಸೂರು: ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಈಗಾಗಲೇ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಈಗ ಮೈಸೂರಿನಲ್ಲಿ ಮತ್ತಿಬ್ಬರು ಸಂತ್ರೆಸ್ತೆಯರು ದೂರು ದಾಖಲಿಸಲಿದ್ದಾರೆ ಎಂದು ಹೇಳಲಾಗಿದೆ.

ಅಕ್ಕಮಹಾದೇವಿ ವಿದ್ಯಾರ್ಥಿನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 12 ಮತ್ತು 14 ವಯಸ್ಸಿನ ವಿದ್ಯಾರ್ಥಿನಿಯರು ಪೋಷಕರೊಂದಿಗೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಿ ಶರಣರ ವಿರುದ್ಧ ಮೈಸೂರಿನ ನಜರಾಬಾದ್​ ಪೊಲೀಸ್​ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ ಎಂದು ಗೊತ್ತಾಗಿದೆ.

ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 21 ರವರೆಗೆ ವಿಸ್ತರಣೆಯಾಗಿರುವ ಬೆನ್ನಲ್ಲೇ ಇನ್ನೆರಡು ಪ್ರಕರಣಗಳು ಪ್ರೋಕ್ಸೊ ಕಾಯ್ದೆಡಿಯಲ್ಲಿ ದಾಖಲಾಗುತ್ತಿರುವುದು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿಸ್ತರಿಸಿದಂತಾಗಿದೆ.

Exit mobile version