Site icon PowerTV

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ.!

ನವದೆಹಲಿ; ಹಿಮಾಚಲ ಪ್ರದೇಶ ಹಾಗೂ ಗುಜರಾತ್​ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಇಂದು ಕೇಂದ್ರ ಚುನಾವಣೆ ಆಯೋಗ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ.

ಹಿಮಾಚಲ ಪ್ರದೇಶ 68 ವಿಧಾನಸಭಾ ಮತಕ್ಷೇತ್ರಗಳಿಗೆ ನವೆಂಬರ್​ 12 ರಂದು ಒಂದೇ ಅಂತದಲ್ಲಿ ಚುನಾವಣೆ ಮತದಾನ ನಡೆಯಲಿದೆ. ಡಿಸೆಂಬರ್​ 8 ರಂದು ಮತದಾನದ ಏಣಿಕೆ ನಡೆಯಲಿದೆ. ಹಿಮಾಚಲ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ 43,000 ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ ಎಂದು ಚುನಾವಣೆ ಆಯೋಗ ಹೇಳಿದೆ.

ಕಳೆದ 2017 ರಲ್ಲಿ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ 21 ಸ್ಥಾನ ಹಾಗೂ 3 ಸ್ಥಾನ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿಲ್ಲ

ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿಲ್ಲ. ಸಿಇಸಿ ರಾಜೀವ್ ಕುಮಾರ್ ಮಾತನಾಡಿ, ಕಳೆದ ಚುನಾವಣೆಯಿಂದ ನಾವು ಸಂಪ್ರದಾಯದಂತೆ ನಡೆದುಕೊಂಡಿದ್ದೇವೆ. ಒಂದು ರಾಜ್ಯದ ಚುನಾವಣಾ ಫಲಿತಾಂಶಗಳು ಮತ್ತೊಂದು ರಾಜ್ಯದ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದ್ದಾರೆ, ಗುಜರಾತ್ ಚುನಾವಣೆಯು ಒಂದು ತಿಂಗಳ ನಂತರ ನಡೆಯಲಿದೆ ಎಂದು ಸೂಚಿಸುತ್ತದೆ.

ಗುಜರಾತ್​ ರಾಜ್ಯದ 182 ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ ಎಂದು ಹೇಳಿದೆ.

 

Exit mobile version