Site icon PowerTV

ಬಿಜೆಪಿ ಶಾಸಕ ಹರೀಶ್​​ ಪೂಂಜಾ ಕಾರ್​​ ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು

ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನ ಅಡ್ಡಗಟ್ಟಿ ದುಷ್ಕರ್ಮಿಗಳ ಗುಂಪೊಂದು ತಲವಾರು ಝಳಪಿಸಲಾಗಿದೆ.

ನಿನ್ನೆ ತಡರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕ ಹರೀಶ್ ಪೂಂಜಾ ಅವರು ಹೋಗುತ್ತಿರುವಾಗ ಮಂಗಳೂರು ಜಿಲ್ಲೆಯ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಕಿಡಿಗೇಡಿಗಳು ಮಚ್ಚುಗಳನ್ನ ಝಳಪಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ವೇಳೆಯಲ್ಲಿ ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು ಕಾರನ್ನು ಬೆನ್ನಟ್ಟಿ ಈ ರೀತಿ ಮಾಡಿದ್ದು, ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ದುಷ್ಕರ್ಮಿಗಳು ತಲವಾರು ಝಳಪಿಸಿ ಪರಾರಿಯಾಗಿದ್ದಾರೆ.

ಈ ಸಂಬಂಧವಾಗಿ ಶಾಸಕ ಹರೀಶ್​ ಪೂಂಜಾ ಹಾಗೂ ಶಾಸಕರ ಕಾರು ಚಾಲಕ ನವೀನ್ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

Exit mobile version