Site icon PowerTV

ಜಸ್ಪ್ರೀತ್ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ ಅಧಿಕೃತ ಆಯ್ಕೆ

ಆಸ್ಟೇಲಿಯಾ: ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗುವ T-20 ವಿಶ್ವಕಪ್ ಗಾಗಿ 15 ಸದಸ್ಯರ ಭಾರತೀಯ ಕ್ರಿಕೆಟ್ ತಂಡದಲ್ಲಿ ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ಅವರ ಬದಲಿಗೆ ಮೊಹಮ್ಮದ್ ಶಮಿ ಅವರನ್ನ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.

ಬೆನ್ನು ನೋವಿನಿಂದ ಗಾಯಗೊಂಡಿದ್ದ ಬುಮ್ರಾ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲರಾದ ಕಾರಣವಾಗಿ ಅಂತಿಮವಾಗಿ ವಿಶ್ವಕಪ್​ನಿಂದ ಹೊರಬಿದ್ದಿದ್ದರು. ಬಳಿಕ ಬುಮ್ರಾ ಸ್ಥಾನಕ್ಕೆ ವೇಗಿ ಮೊಹಮ್ಮದ್ ಶಮಿ ಹಾಗೂ ದೀಪಕ್​ ಚಹರ್​ ಅವರ ಹೆಸರು ಕೇಳಿಬಂದಿತ್ತು. ಅಧಿಕೃತವಾಗಿ ಈಗ ಶಮಿ ವಿಶ್ವಕಪ್​ಗೆ ಆಯ್ಕೆ ಮಾಡಲಾಗಿದ್ದು, ಟೀಂ ಇಂಡಿಯಾವನ್ನ ತಂಡವನ್ನ ಇಂದು ಸೇರಿಕೊಂಡರು.

T-20 ವಿಶ್ವಕಪ್​ನಲ್ಲಿ ಭಾರತ ತಂಡ ಅಕ್ಟೋಬರ್ 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಸೆಣಸಾಡಲಿದೆ.

ವಿಶ್ವಕಪ್​ಗೆ 15 ಸದಸ್ಯರ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

Exit mobile version