Site icon PowerTV

ವೀಕೆಂಡ್‌ನಲ್ಲಿ ಹರಿದು ಬಂದ ಭಕ್ತಸಾಗರ

ಹಾಸನ : ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದ್ದು ಇಂದು 2ನೇ ದಿನದ ದರ್ಶನಕ್ಕೆ ಜನ ಸಾಗರವೇ ಹರಿದು ಬಂದಿದೆ.

ಸಾರ್ವಜನಿಕ ದರ್ಶನದ ಎರಡನೇ ದಿನ ಭಾರಿ ಸಂಖ್ಯೆಯಲ್ಲಿ ಭಕ್ತರು ಲಗ್ಗೆ ಇಟ್ಟಿದ್ದಾರೆ. ವೀಕೆಂಡ್ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು ಗರ್ಭಗುಡಿಯಲ್ಲಿ ಸರ್ವಾಲಂಕಾರ ಭೂಷಿತೆಯಾಗಿ ಕಂಗೊಳಿಸುತ್ತಿರುವ ದೇವಿಯನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಿರುವ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇನ್ನು, ಆಕ್ಟೋಬರ್ 27 ರ ತನಕ ಹಾಸನಾಂಬೆ ಜಾತ್ರೆ ನಡೆಯಲಿದ್ದು, ಒಟ್ಟು 12 ದಿನ ದೇವಿ ದರ್ಶನ ಸಿಗಲಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮ.3.30 ರಿಂದ ರಾತ್ರಿ ವರೆಗೆ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಮಧ್ಯಾಹ್ನ 1.30 ರಿಂದ ಮ.3.30 ರವರೆಗೆ ದೇವರಿಗೆ ನೈವೇದ್ಯ ಹಾಗೂ ಅಲಂಕಾರ ಇರುವುದರಿಂದ ಭಕ್ತರಿಗೆ ದೇವಿ ದರ್ಶನ ಇರುವುದಿಲ್ಲ. ಹಾಸನಾಂಬೆ ದೇಗುಲ ಹಲವು ಪಾವಡಗಳಿಂದಲೂ ಭಕ್ತರನ್ನ ಸೆಳೆಯುತ್ತೆ. ದೇವಿಗೆ ಒಮ್ಮೆ ಹಚ್ಚಿದ ಹಣತೆ ಆರಲ್ಲ. ದೇವರ ಮುಡಿಗಿಟ್ಟ ಹೂ ಬಾಡಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡ್ಕೊಂಡು ಬಂದಿದೆ.

Exit mobile version