Thursday, August 28, 2025
HomeUncategorizedಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ. ಬಿ ವರಾಳೆ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ. ಬಿ ವರಾಳೆ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಾಳೆ ಅವರು ರಾಜ್ಯಪಾಲರ ಸಮ್ಮುಖದಲ್ಲಿ ಪ್ರಮಾಣವಚನ ಇಂದು ಸ್ವೀಕರಿಸಿದರು.

ನೂತನವಾಗಿ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರಿಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ನೂತನ ನ್ಯಾಯಮೂರ್ತಿಗಳಿಗೆ ಅಭಿನಂದಿಸಿ ಶುಭ ಕೋರಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು  ಸೇರಿದಂತೆ ಇನ್ನೀತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments