Site icon PowerTV

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಅಬ್ದುಲ್ ಅಜೀಮ್ ನೇಮಕ

ಬೆಂಗಳೂರು : ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಅಬ್ದುಲ್ ಅಜೀಮ್ ಅವರನ್ನು ಮರು ನೇಮಕ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಬಿಜೆಪಿ ಮುಖ‌ಂಡ ಅಬ್ದುಲ್ ಅಜೀಮ್ ಅವರನ್ನು ಮರು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2019 ಅಕ್ಟೋಬರ್ 15 ರಂದು ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಅಬ್ದುಲ್ ಅಜೀಮ್ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಆದರೆ ಅವರ ಅಧಿಕಾರ ಅವಧಿ ನಿನ್ನೆಗೆ ಮುಕ್ತಾಯಗೊಂಡಿತ್ತು. ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಅಬ್ದುಲ್ ಅಜೀಮ್ ಅವರನ್ನು ಮರುನಾಮ ನಿರ್ದೇಶಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ನಂತರ ರಾಜಕಾರಣಕ್ಕೆ ಬಂದ ಅಜೀಮ್ ಅವರು ಜೆಡಿಎಸ್​​ನಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ಅವರು ಬಿಜೆಪಿಗೆ ಸೇರಿದ್ದರು.

Exit mobile version