Sunday, August 24, 2025
Google search engine
HomeUncategorizedಮುರುಘಾ ಮಠಕ್ಕೆ ಹೊಸ ಪೀಠಾಧಿಪತಿ ನೇಮಕ.!

ಮುರುಘಾ ಮಠಕ್ಕೆ ಹೊಸ ಪೀಠಾಧಿಪತಿ ನೇಮಕ.!

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಅಡಿ ಬಂಧನವಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಬದಲಾವಣೆ ಮಾಡಿ  ಮುರುಘಾ ಮಠಕ್ಕೆ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಶ್ರೀ ಅವರನ್ನ ನೇಮಕ ಮಾಡಲಾಗಿದೆ.

ಇಂದು ಮುರುಘಾಮಠದಿಂದ ನೇಮಕ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿ, ಧಾರ್ಮಿಕ, ಸೇವಾ, ಪೂಜಾ ಕಾರ್ಯ ಮಠದ ಪರಂಪರೆ ಮುಂದುವರೆಸಿಕೊಂಡು ಹೋಗಲು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಶ್ರೀಗಳು ನೇಮಕ ಮಾಡಿ ಮುರುಘಾ ಶ್ರೀಗಳಿಂದ ಪತ್ರ ಹೊರಡಿಸಲಾಗಿದೆ.

ಇನ್ನು ಬಸವ ಶ್ರೀಗಳು ಅವರ ನೇಮಕಕ್ಕೆ ಹಲವು ಕಡೆ ವಿರೋಧ ವ್ಯಕ್ತವಾಗಿದ್ದು, ಮಠಕ್ಕೆ ಪ್ರಭಾರ ಪೀಠಾಧ್ಯಕ್ಷರ ನೇಮಕವನ್ನ ಖಂಡಿಸುತ್ತೇವೆ ಎಂದು ಭಕ್ತರು ಕಿಡಿಕಾರಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments