Site icon PowerTV

ಅಪಘಾತ ಕುರಿತು HDK ಸಂತಾಪ

ಹಾಸನ : ಜಿಲ್ಲೆಯ ಅರಸೀಕೆರೆಯಲ್ಲಿ ಭೀಕರ ಅಪಘಾತವಾಗಿ 9 ಜನ ಮೃತ ಪಟ್ಟಿರುವುದಕ್ಕೆ ಮಾಜಿ ಮುಖ್ಯಮಂತ್ರಿ H. D ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಮೃತರೆಲ್ಲರೂ ಧರ್ಮಸ್ಥಳ ಸೇರಿ ಕೆಲ ಪುಣ್ಯಕ್ಷೇತ್ರಗಳಿಗೆ ತೆರಳಿ ದೈವದರ್ಶನ ಪಡೆದು ತಮ್ಮ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದರು. ಇನ್ನು ಕೆಲ ಕಾಲವಷ್ಟೇ ಕ್ರಮಿಸಿದ್ದಿದ್ದರೆ ಮನೆ ಸೇರಿಕೊಳ್ಳುತ್ತಿದ್ದರು. ಆದರೆ, ಅವರೆಲ್ಲರೂ ಅಪಘಾತದಲ್ಲಿ ಸಾವಿಗೆ ತುತ್ತಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು, ಜಿಲ್ಲಾಧಿಕಾರಿಗಳು ಆಸ್ಪತ್ರೆಯಲ್ಲಿರುವ ಮೃತದೇಹಗಳ ಮರಣೋತ್ತರ ಪರೀಕ್ಷೆ ಮುಗಿಸಲು ಕ್ರಮ ವಹಿಸಿ, ತಕ್ಷಣ ಸಂಬಂಧಿಕರಿಗೆ ಹಸ್ತಾಂತರ ಮಾಡಬೇಕು. ಗಾಯಾಳುಗಳಿಗೆ ಉಚಿತ, ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರಿಗೆ ರಾಜ್ಯ ಬಿಜೆಪಿ ಸರ್ಕಾರ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ಕರುಣಿಸಲಿ ಹಾಗೂ ಗಾಯಾಳುಗಳೆಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Exit mobile version