Tuesday, August 26, 2025
Google search engine
HomeUncategorizedಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಐತಿಹಾಸಿಕ‌ ಚುನಾವಣೆಗೆ AICC ಸಜ್ಜು

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಐತಿಹಾಸಿಕ‌ ಚುನಾವಣೆಗೆ AICC ಸಜ್ಜು

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಐತಿಹಾಸಿಕ‌ ಚುನಾವಣೆಗೆ ಎಐಸಿಸಿ ಸಜ್ಜಾಗಿದ್ದು, ಕರ್ನಾಟಕದಲ್ಲಿಯೇ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮತದಾನ ಮಾಡಲಿದ್ದಾರೆ.

ಇಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಹತ್ವದ ಚುನಾವಣೆ ನಡೆಯಲಿದ್ದು, ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಸಂಗನಲ್ಲ ಕ್ಯಾಂಪ್’ನಲ್ಲಿ ರಾಹುಲ್ ಗಾಂಧಿ 40 ಸದಸ್ಯರು ಮತದಾನ ಮಾಡಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ 494 ಸದಸ್ಯರು ಮತದಾನ ಮಾಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ ಕೆ ಹರಿಪ್ರಸಾದ್, ಕೆ ಎಚ್ ಮುನಿಯಪ್ಪ, ಎಂ ಬಿ ಪಾಟೀಲ್ ಸೇರಿದಂತೆ ಇತರರು ಕೆಪಿಸಿಸಿ ಕಚೇರಿಯಲ್ಲಿ ಮತದಾನ ಮಾಡಲಿದ್ದಾರೆ.

ಇನ್ನು, ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯಲಿದ್ದು, ಕರ್ನಾಟಕದ ಎರಡೂ ಮತದಾನ ಕೇಂದ್ರಗಳಿಂದ ದೆಹಲಿಯ ಸ್ಟ್ರಾಂಗ್ ರೂಂಗೆ ಮತ ಪೆಟ್ಟಿಗೆಗಳ ರವಾನಿಸಲಾಗಿದೆ. ಇನ್ನು, ಎಐಸಿಸಿ ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಚುನಾವಣೆ ನಡೆದರೂ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.

RELATED ARTICLES
- Advertisment -
Google search engine

Most Popular

Recent Comments