Tuesday, August 26, 2025
Google search engine
HomeUncategorizedತಲಕಾವೇರಿಯಲ್ಲಿ ತೀರ್ಥೋದ್ಬವಕ್ಕೆ ಭರ್ಜರಿ ಸಿದ್ದತೆ

ತಲಕಾವೇರಿಯಲ್ಲಿ ತೀರ್ಥೋದ್ಬವಕ್ಕೆ ಭರ್ಜರಿ ಸಿದ್ದತೆ

ಕಾವೇರಿ : ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಬವಕ್ಕೆ ಭರ್ಜರಿ ಸಿದ್ದತೆಗಳು ನಡೆಯುತ್ತಿವೆ.

ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿದೆಡೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಲಿದ್ದು ಇದಕ್ಕಾಗಿ ತಲಕಾವೇರಿ ಹಾಗು ತ್ರಿವೇಣಿ ಸಂಗಮ ಭಾಗಮಂಡಲ ಸಕಲರೀತಿಯಲ್ಲಿ ಸಿದ್ದತೆ ನಡೆಯುತ್ತಿದೆ. ಕೊಡವರ ಕುಲದೇವತೆ ಕರ್ನಾಟಕದ ಜೀವನದಿ ಕಾವೇರಿಯ ತೀರ್ಥೋದ್ಬವಕ್ಕೆ ಜಿಲ್ಲಾಡಳಿತ ಕೂಡ ಈಗಾಗಲೇ ತಯಾರಿ ಮಾಡಿಕೊಂಡಿದೆ.

ನಾಳೆ ಸಂಜೆ 7ಗಂಟೆ 21 ನಿಮಿಷಕ್ಕೆ ಮೇಷ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದ್ದು ಬ್ರಹ್ಮ ಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿಬರಲಿದೆ. ಈ ವಿಸ್ಮಯನೋಡಲು ಜನರು ಕಾತರರಾಗಿ ಕಾಯುತ್ತಿದ್ದಾರೆ. ವಾರದಿಂದಲೇ ನಾನಾ ಪೂಜಾ ಕೈಂಕರ್ಯಗಳು ನಡೆಯಲಿದ್ದು ಅರ್ಚಕರ ತಂಡ ಕೂಡ ಕಾವೇರಿಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ. ಈ ಬಾರಿ ಜಲಪ್ರಳಯದಿಂದ ತತ್ತರಿಸಿರೋ ಜನತೆಗೆ ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಬಂದು ಒಳ್ಳೇದು ಮಾಡಲಿದ್ದಾಳೆ ಅನ್ನೋ ನಂಬಿಕೆ ಭಕ್ತಗಣದ್ದಾಗಿದೆ.

ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸೋ ಹಿನ್ನೆಲೆಯಲ್ಲಿ 10 ಕಿಲೋಮೀಟರ್ ದೂರದಿಂದಲೇ ಲೈಟಿಂಗ್ ವ್ಯವಸ್ಥೆಗಾಗಿ 500 ಕ್ಕೂ ಹೆಚ್ಚು ಟ್ಯೂಬ್ ಲೈಟ್​ಗಳು, ತಾತ್ಕಾಲಿಕ ಶೌಚಾಲಯ, ಅನ್ನದಾನಕ್ಕೆ ವ್ಯವಸ್ಥೆ, ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಸೇರಿದಂತೆ 400ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆಮಾಡಲಾಗಿದೆ. ಕಾವೇರಿ ಮಾತೆಯ ದರ್ಶನಕ್ಕೆ ಸಹಸ್ರ ಸಹಸ್ರ ಭಕ್ತರು ಲಗ್ಗೆಯಿಡುತ್ತಿದ್ದು ಯಾವುದೇ ರೀತಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಏಕಮುಖ ಸಂಚಾರದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.

RELATED ARTICLES
- Advertisment -
Google search engine

Most Popular

Recent Comments