Site icon PowerTV

ರಾಜ್ಯದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಮುಂದಿನ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ.

ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ವರ್ಷ ಬೆಂಗಳೂರಿನಲ್ಲಿ 1,706 ಮಿಮೀ ದಾಖಲೆಯ ಮಳೆಯಾಗಿದೆ. ಈ ಮೂಲಕ ಬೆಂಗಳೂರಿನ ಮಳೆ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2017ರಲ್ಲಿ ಬೆಂಗಳೂರಿನಲ್ಲಿ 1,696 ಮಿಮೀ ಮಳೆ ದಾಖಲಾಗಿತ್ತು. ಆ ದಾಖಲೆಯನ್ನು ಈ ಬಾರಿಯ ಮಳೆ ಮುರಿದಿದೆ.

Exit mobile version