Site icon PowerTV

KSRTC ಸಿಬ್ಬಂದಿಗಳಿಗೆ 50 ಲಕ್ಷ ರೂ ವಿಮಾ ಸೌಲಭ್ಯ ಜಾರಿ

ಬೆಂಗಳೂರು: ಇದೇ ಮೊದಲ ಬಾರಿಗೆ KSRTC ಸಿಬ್ಬಂದಿಗಳಿಗೆ ರೂ.50 ಲಕ್ಷ ರೂ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯ ಸಾರಿಗೆ ನಿಗಮ 50 ಲಕ್ಷ ರೂ ಗಳ ಅಪಘಾತ ವಿಮಾ ಯೋಜನೆ ಸೌಲಭ್ಯ ಕಲ್ಪಿಸುವ ಮೂಲಕ ಸಂಸ್ಥೆಯ ಕಾರ್ಮಿಕರ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಲು ಮುಂದಾಗಿರುವುದು ಒಂದು ಐತಿಹಾಸಿಕ ನಿರ್ಧಾರವಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಸಾರಿಗೆ ಸಿಬ್ಬಂದಿ ಅಪಘಾತದಲ್ಲಿನ ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆಗಾಗಿ ಗರಿಷ್ಟ 10 ಲಕ್ಷ ರೂ ಹಾಗೂ ಔಷಧಗಳ ಆಮದಿಗಾಗಿ ಗರಿಷ್ಠ 5 ಲಕ್ಷ ರೂ, ಕೋಮಾದಲ್ಲಿ ಮೃತಪಟ್ಟರೆ ಹೆಚ್ಚುವರಿಯಾಗಿ 2 ಲಕ್ಷ ರೂ, ಏರ್ ಆ್ಯಂಬುಲೆನ್ಸ್​ ಸೇವೆಗೆ 10 ಲಕ್ಷ ರೂ ವಿಮಾ ಪರಿಹಾರ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಸರ್ಕಾರ ಬಸ್​ ಸಿಬ್ಬಂದಿಗಳು ಅಪಘಾತದಲ್ಲಿ ಮೃತಪಟ್ಟರೆ ಮಕ್ಕಳ ಪದವಿ ಶಿಕ್ಷಣಕ್ಕೆ ಗರಿಷ್ಠ 5 ಲಕ್ಷ ರೂ, ಹಾಗೂ ಹೆಣ್ಣು ಮಗಳ ವಿವಾಹಕ್ಕೆ ಗರಿಷ್ಟ 5 ಲಕ್ಷ ರೂ ವರೆಗೆ ಆರ್ಥಿಕ ಸಹಾಯವನ್ನು ಈ ವಿಮಾ ಯೋಜನೆ ಒಳಗೊಂಡಿರುತ್ತದೆ ಎಂದು ತಿಳಿಸಿದರು.
Exit mobile version