Site icon PowerTV

ತಡೆಗೋಡೆ ಕುಸಿತ ಬೈಕ್​, ಕಾರುಗಳು ಜಖಂ

ಬೆಂಗಳೂರು :  ನಗರದಲ್ಲಿ ಬುಧವಾರ ರಾತ್ರಿ ಸುರಿದ ಮಳೆ ಅವಾಂತರ ಸೃಷ್ಟಿಯಾಗಿದೆ.

ನಗರದ ಶೇಷಾದ್ರಿಪುರಂ ಸಮೀಪ ಜೆಡಿಎಸ್ ಪಕ್ಷದ ಮುಂಭಾಗದಲ್ಲಿರುವ ನಮ್ಮ ಮೆಟ್ರೋ ತಡೆ ಗೋಡೆ ಭಾರೀ ಮಳೆಗೆ ಕುಸಿದಿದೆ. ಪರಿಣಾಮ ಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರು, ಬೈಕುಗಳು ಜಖಂಗೊಂಡಿವೆ. ಆದರೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು, ತಡೆಗೋಡೆ ಪಕ್ಕದಲ್ಲಿದ್ದ 7 ಕಾರುಗಳು, 2 ಬೈಕ್‌ಗಳಿಗೆ ಹಾನಿಯಾಗಿದೆ. ಆದರೆ ಗೋಡೆ ಕುಸಿತದ ಕುರಿತು ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ರಾತ್ರಿಯೇ ಸ್ಥಳೀಯರು ಮಾಹಿತಿ ನೀಡಿದ್ದರು. ಆದರೆ, ಅಧಿಕಾರಿಗಳು 10 ಗಂಟೆ ಕಳೆದರೂ ಸ್ಥಳಕ್ಕೆ ಆಗಮಿಸಿಲ್ಲ. ಇನ್ನು ಮೆಟ್ರೋದಲ್ಲಿ ಆಗುತ್ತಿದ್ದ ಕಳಪೆ ಕಾಮಗಾರಿ ಬಟಾಬಯಲಾಗಿದೆ.

Exit mobile version