Site icon PowerTV

ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮೂರು ದಿನಗಳ ಕಾಲ ಮಳೆ ಸುರಿಯಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾದ ಕಾರಣ ಅ. 24ರವರೆಗೆ ರಾಜ್ಯದಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ 3 ದಿನ ಹಳದಿ ಅಲರ್ಟ್ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಚದುರಿದ ಮಳೆ ನಿರೀಕ್ಷೆ ಇದ್ದು ಇಂದು  ಬೆಂಗಳೂರಿನಲ್ಲೂ ಭಾರೀ ಮಳೆ ನಿರೀಕ್ಷೆ ಮಾಡಲಾಗಿದೆ.

Exit mobile version