Site icon PowerTV

10 ಲಕ್ಷ ಉದ್ಯೋಗ ಸೃಷ್ಟಿಯ ರೋಜ್‌ಗಾರ್ ಮೇಳಕ್ಕೆ ನರೇಂದ್ರ ಮೋದಿ ಚಾಲನೆ

ನವದೆಹಲಿ: ಜಾಗತಿಕ ಬಿಕ್ಕಟ್ಟು ಮತ್ತು ಆರ್ಥಿಕ ಕುಸಿತದಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಭಾರತವು ಅತ್ಯುತ್ತಮವಾಗಿ ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್​ ಮೂಲಕ ರೋಜ್‌ಗಾರ್ ಮೇಳಕ್ಕೆ ಇಂದು ಚಾಲನೆ ನೀಡಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಇಂದು ಭಾರತವು 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಕಳೆದ 8 ವರ್ಷಗಳಲ್ಲಿ ಕೈಗೊಂಡ ಸುಧಾರಣೆಗಳಿಂದಾಗಿ ಈ ಸಾಧನೆ ಮಾಡಿದ್ದೇವೆ ಎಂದರು.

ಕೇಂದ್ರ ಸರ್ಕಾರವು ಉದ್ಯೋಗ ಮೇಳಗಳ ಮೂಲಕ 10 ಲಕ್ಷ ಜನರ ನೇಮಕಾತಿ ಮಾಡುವ ಅಭಿಯಾನ ಇದಾಗಿದೆ. ಈ ಸಮಾರಂಭದಲ್ಲಿ ಮೊದಲ ಹಂತದಲ್ಲಿ ಹೊಸದಾಗಿ ಸೇರ್ಪಡೆಗೊಂಡ 75 ಸಾವಿರ ಮಂದಿಗೆ ಇಂದು ನೇಮಕಾತಿ ಪತ್ರ ವಿತರಿಸಲಾಗುತ್ತದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಸಂಕಲ್ಪ ಈಡೇರಿಕೆಗಾಗಿ, ನಾವು ಸ್ವಾವಲಂಬಿ ಭಾರತದ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ. ನಮ್ಮ ಕರ್ಮಯೋಗಿಗಳ ಪ್ರಯತ್ನದಿಂದ ಸರ್ಕಾರಿ ಇಲಾಖೆಗಳ ದಕ್ಷತೆ ಹೆಚ್ಚಾಗಿದೆ. 7-8 ವರ್ಷಗಳ ಶ್ರಮ ಇದರ ಹಿಂದೆ ಇದೆ ಎಂದು ಹೇಳಿದ್ದಾರೆ.

Exit mobile version