Site icon PowerTV

‘ಕಾಂತಾರ’ ಚಿತ್ರ ವೀಕ್ಷಿಸಿದ ಶಾಮನೂರು ಶಿವಶಂಕರಪ್ಪ

ದಾವಣಗೆರೆ; ಕನ್ನಡದ ಕಾಂತಾರ ಸಿನಿಮಾ ದೇಶ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಿಷಬ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿದ ಸಿನಿಮಾಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ನಿನ್ನೆ ಡಾ. ವೀರೇಂದ್ರ ಹೆಗ್ಗಡೆ ಅವರು ಚಿತ್ರ ನೋಡಿ ಮೆಚ್ಚುಗೆ ನುಡಿಗಳನ್ನಾಡಿದ್ದರು.

ಅದರಂತೆ ಇಂದು ದಾವಣಗೆರೆ ನಗರದ ಎಸ್​ಎಸ್​ ಮಾಲ್​ನಲ್ಲಿ ಕಾಂತಾರ ಸಿನಿಮಾವನ್ನ ಕಾಂಗ್ರೆಸ್​ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ ವೀಕ್ಷಣೆ ಮಾಡಿದರು.

ಈ ಇಳಿವಯಸ್ಸಿನಲ್ಲೂ ಶಾಮನೂರು ಶಿವಶಂಕರಪ್ಪ ಅವರು ಸ್ನೇಹಿತರಾದ ಅಥಣಿ ವೀರಣ್ಣ, ಎಂಜಿ ಈಶ್ವರಪ್ಪ ಅವರೊಂದಿಗೆ ಸೇರಿ ಥೇಟರ್​ಗೆ ಬಂದು ಸಿನಿಮಾ ವೀಕ್ಷಿಸಿದ್ದನ್ನ ಕಂಡು ಎಲ್ಲರನ್ನ ಬೆರಗುಗೊಳಿಸಿತು.

ಅಲ್ಲದೇ ದಾವಣಗೆರೆ ಜಿಲ್ಲೆಯ ಪೊಲೀಸ್ ಇಲಾಖೆಯ 200ಕ್ಕೂ ಹೆಚ್ಚು ಸಿಬ್ಬಂದಿ ಕಾಂತಾರ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ಪೊಲೀಸ್ ಸಿಬ್ಬಂದಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ.

Exit mobile version