Site icon PowerTV

ಬಿಜೆಪಿ ಶಾಸಕ ಆನಂದ್ ಮಾಮನಿ ನಿಧನ

ಬೆಂಗಳೂರು : ವಿಧಾನಸಭೆ ಡೆಪ್ಯುಟಿ ಸ್ಪೀಕರ್​​ ಆನಂದ್ ಮಾಮನಿ ಮಣಿಪಾಲ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ, ಬೆಂಗಳೂರಿನಿಂದ ಸವದತ್ತಿಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತಿದ್ದು, ಇಂದು ಸಂಜೆ 4 ಗಂಟೆಗೆ ಸವದತ್ತಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಪತ್ನಿ, ಇಬ್ಬರು ಮಕ್ಕಳನ್ನ ಅಗಲಿದ ಆನಂದ್ ಮಾಮನಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

ಇನ್ನು, ಮೂರು ಬಾರಿ ಬಿಜೆಪಿ ಶಾಸಕರಾಗಿದ್ದ ಆನಂದ್ ಮಾಮನಿ, ಸವದತ್ತಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದರು, 2008ರಲ್ಲಿ ಮೊದಲ ಬಾರಿ ಸವದತ್ತಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, 2008ರಲ್ಲಿ ಯಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿದ್ದು, 2013ರಲ್ಲಿ 2ನೇ ಬಾರಿ, 2018ರಲ್ಲಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2015ರಲ್ಲಿ ಬೆಳಗಾವಿಯ ಡಿಸಿಸಿ ಬ್ಯಾಂಕ್​ನ ನಿರ್ದೇಶಕರಾಗಿ ಆಯ್ಕೆಯಾಗಿದ್ದು, 2020ರಲ್ಲಿ ಕರ್ನಾಟಕ ವಿಧಾನಸಭೆ ಉಪ ಸ್ಪೀಕರ್ ಆಗಿ​​​ ಸೇವೆ ಸಲ್ಲಿಸಿದ್ದಾರೆ.

Exit mobile version