Site icon PowerTV

ರಾಜ್ಯಪಾಲರು RSS ಅಣತಿಯಂತೆ ನಡೆಯುತ್ತಿದ್ದಾರೆ- ಸಿಎಂ ಪಿಣರಾಯಿ ಆರೋಪ

ಕೇರಳ: ಕೇರಳ ರಾಜ್ಯಪಾಲರು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​ಎಸ್​ಎಸ್​) ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಕೇರಳ ಸಿಎಂ ಆರೋಪ ಮಾಡಿದ್ದಾರೆ.

ಕೇರಳ ಆರಿಫ್ ಮೊಹಮ್ಮದ್ ಖಾನ್ ಅವರು ಆರ್‌ಎಸ್‌ಎಸ್‌ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿ, ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ರಾಜೀನಾಮೆಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಆದೇಶ ನೀಡಿರುವ ಒಂದು ದಿನದ ನಂತರ ಸಿಎಂ ಕೇರಳದ ಪಾಲಕ್ಕಾಡ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇರಳ ರಾಜ್ಯಪಾಲರು ವಿಶ್ವ ವಿದ್ಯಾಲಯ ಕುಲಪತಿ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡು ತನಗಿಂತ ಹೆಚ್ಚಿನ ಅಧಿಕಾರವನ್ನು ಚಲಾಯಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕೇರಳ ರಾಜ್ಯಪಾಲರ ತಮ್ಮ ಹುದ್ದೆಗೆ ತಕ್ಕಂತೆ ಸಂವಿಧಾನದ ಘನತೆಯನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕೆ ಹೊರುತು ಕೇರಳ ಸರ್ಕಾರದ ವಿರುದ್ಧ ಅಲ್ಲ ಎಂದು ರಾಜ್ಯಪಾರ ವಿರುದ್ಧ ಸಿಎಂ ಆಕ್ರೋಶ ಹೊರಹಾಕಿದರು.

Exit mobile version