Site icon PowerTV

ವರ್ಷಕ್ಕೊಮ್ಮೆ ದರ್ಶನ ಕೊಡೋ ಬೆಟ್ಟದ ತಾಯಿ

ಚಿಕ್ಕಮಗಳೂರು : ವರ್ಷಕ್ಕೊಮ್ಮೆ ದರ್ಶನ ಕೊಡೋ ಬೆಟ್ಟದ ತಾಯಿ ದೇವಿರಮ್ಮನ ದರ್ಶನ ಪಡೆಯೋಕೆ ಭಕ್ತಸಾಗರವೇ ಹರಿದು ಬಂದಿದೆ.

ಚಿಕ್ಕಮಗಳೂರಿನ ಮಲ್ಲೇನಹಳ್ಳಿ ದೇವಿರಮ್ಮನ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದೆ. ವರ್ಷಕ್ಕೊಮ್ಮೆ ದರ್ಶನ ಕೊಡೋ ಬೆಟ್ಟದ ತಾಯಿಯನ್ನ ನೋಡೋಕೆ ಈ ವರ್ಷ ನಿರೀಕ್ಷೆಗೂ ಮೀರಿದ ಭಕ್ತವೃಂದ ಆಗಮಿಸಿದೆ.

ಕಳೆದ ಎರಡ್ಮೂರು ವರ್ಷಗಳಿಂದ ಮಳೆ ಹಾಗೂ ಕೊರೋನಾದಿಂದ ಭಕ್ತರ ಆಗಮನ ಕಡಿಮೆ ಇತ್ತು. ಆದರೆ, ಈ ವರ್ಷ ಮಧ್ಯರಾತ್ರಿಯಿಂದಲೇ ಬೆಟ್ಟ ಹತ್ತಿದ ಭಕ್ತರ ಸಂಖ್ಯೆ ಅಂದಾಜು 80 ಸಾವಿರ ದಾಟಿದೆ. ಇಲ್ಲಿ ಹರಕೆ ಕಟ್ಟಿಕೊಂಡೋರು ಬೆಟ್ಟ ಹತ್ತುವಾಗ ಎಷ್ಟೇ ಕಷ್ಟವಾದ್ರು, ಅವರ ಶಕ್ತಿಗನುಸಾರವಾಗಿ ಸೌದೆಯನ್ನ ಹೊತ್ತೊಯ್ಯುತ್ತಾರೆ. ಇದರ ಜೊತೆಗೆ ಸೀರೆ, ತುಪ್ಪ, ಬೆಣ್ಣೆ, ಕಾಯಿ, ಬಾಳೆಹಣ್ಣನ್ನ ದೇವಿಗೆ ಸಮರ್ಪಿಸ್ತಾರೆ.

Exit mobile version