Site icon PowerTV

ನಾಳೆ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ

ನವದೆಹಲಿ : ನಾಳೆ ಮಲ್ಲಿಕಾರ್ಜುನ ಖರ್ಗೆ AICC ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.

ನಾಳೆ ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ನಾಯಕರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ನಿಮಿತ್ತ ವಿಪಕ್ಷ ನಾಯಕ ಸಿದ್ದರಾಮಯ್ಯ ತೆರಳಲಿದ್ದಾರೆ. ಇದೇ ವೇಳೆ ದೆಹಲಿಯಲ್ಲಿ ವರಿಷ್ಠ ನಾಯಕರ ಭೇಟಿ ಮಾಡಿ ರಾಜ್ಯ ರಥಯಾತ್ರೆ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆಯಿದೆ.

ನವೆಂಬರ್​ನಲ್ಲಿ ರಥಯಾತ್ರೆ ನಡೆಸಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ರಥಯಾತ್ರೆ ಮಾಡಿ ಎಂದು ರಾಹುಲ್ ಗಾಂಧಿ ತಿಳಿಸಿರುವ ಹಿನ್ನಲೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ. ಎಂಬಿ ಪಾಟೀಲ್ , ಖಂಡ್ರೆ, ಧೃವನಾರಾಯಣ್, ಪರಮೇಶ್ವರ್, ಸಲೀಂ, ಪ್ರಿಯಾಂಕ್ ಖರ್ಗೆ ದೆಹಲಿಗೆ ಭೇಟಿ ನೀಡಲಿದ್ದು ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Exit mobile version