Site icon PowerTV

ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನಲೆಯಲ್ಲಿ ಇಂದು ರಾಜ್ಯ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕರಿಸಿದರು.

ಈ ವೇಳೆ ರಾಷ್ಟ್ರೀಯ ಕಾಂಗ್ರೆಸ್​ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೂಗುಚ್ಛ ನೀಡಿ, ಖರ್ಗೆಯವರ ಸುದೀರ್ಘ ರಾಜಕೀಯ ಅನುಭವ ಹಾಗೂ ಅವರ ಜ್ಞಾನವು ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ನೀಡಲಿ ಎಂದು ಶುಭಾಶಯ ಕೋರಿದರು.

ಇನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ದಿನವೇ ರಾಷ್ಟ್ರೀಯ ಕಾಂಗ್ರೆಸ್ ಕಚೇರಿಯಲ್ಲಿ ಕಾಣಿಸಿಕೊಂಡರು. ಈ ವೇಳೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಉಪಸ್ಥಿತರಿದ್ದರು.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ದೊರಕಿಸಿಕೊಡುವಲ್ಲಿ ಮಲ್ಲಿಕಾರ್ಜುನ್​ ಖರ್ಗೆ ಅವರ ಶ್ರಮ, ಬದ್ಧತೆ ಬಹುದೊಡ್ಡದು. ಆರ್ಟಿಕಲ್ 371ಜೆ ಕಾರಣದಿಂದಾಗಿ ಇಂದು ಉದ್ಯೋಗ ಪಡೆದುಕೊಂಡಿರುವ, ಬದುಕು ರೂಪಿಸಿಕೊಂಡಿರುವ ಕಲ್ಯಾಣ ಕರ್ನಾಟಕದ ಯುವ ಸಮುದಾಯ ಖರ್ಗೆಯವರನ್ನು ಸದಾ ಸ್ಮರಿಸುತ್ತಾರೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್ ಮೂಲಕ ಶುಭ ಹಾರೈಸಿತು.

Exit mobile version