Site icon PowerTV

“ನಾನು ಹಿಂದೂ ರಾಮಯ್ಯ” ಕೃತಿ ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು: ಪತ್ರಿಕೋದ್ಯಮದಲ್ಲಿ ಸಾಕಷ್ಟು ಹೆಸರುಗಲಿಸಿದ್ದ ಹಿರಿಯ ಪತ್ರಕರ್ತ ಪಿ. ರಾಮಯ್ಯ ರವರ 60 ವರ್ಷಗಳ ಅನುಭವದ ಕಥನವನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಪುಸ್ತಕವನ್ನ ಬಿಡುಗಡೆ ಮಾಡಿಸಲಾಯಿತು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ, ಅಭಿಮಾನಿ ಪ್ರಕಾಶನ ಪ್ರಕಟಿಸಿರುವ ಹಿರಿಯ ಪತ್ರಕರ್ತ ಪಿ. ರಾಮಯ್ಯ ಅವರ ಅನುಭವ ಕಥನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪುಸ್ತಕ ಬಿಡುಗಡೆ ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ. ಕೃಷ್ಣ, ಕೃತಿಯ ಲೇಖಕ ಪಿ. ರಾಮಯ್ಯ ಅಭಿಮಾನಿ ಪ್ರಕಾಶನದ ಟಿ. ವೆಂಕಟೇಶ್, ಹಿರಿಯ ಪತ್ರಕರ್ತ ಹುಣಸವಾಡಿ ರಾಜನ್, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ಹಾಗೂ  ವಾರ್ತಾ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಹೆಚ್.ಬಿ. ದಿನೇಶ್ ಉಪಸ್ಥಿತರಿದ್ದರು.

Exit mobile version