Site icon PowerTV

ಹಿಂದುಳಿದ ವರ್ಗಗಳ ನಾಯಕರ ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಈಶ್ವರಪ್ಪ ಗೈರು

ಬೆಂಗಳೂರು : ಅಕ್ಟೋಬರ್ 30ಕ್ಕೆ ಬಿಜೆಪಿಯಿಂದ ಒಬಿಸಿ ಸಮಾವೇಶ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕರ ಸುದ್ದಿಗೋಷ್ಟಿ ನಡೆಯಿತು.

ಅಕ್ಟೋಬರ್ 30ಕ್ಕೆ ಬಿಜೆಪಿಯಿಂದ ಒಬಿಸಿ ಸಮಾವೇಶ ಹಿನ್ನೆಲೆಯಲ್ಲಿ ಮುಂದಿನ ಎರಡು ತಿಂಗಳ ಅವಧಿಯಲ್ಲಿ ಜನ ಜಾಗೃತಿ ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಿದ್ದೇವೆ. ಎಲ್ಲ ಸಮುದಾಯಗಳನ್ನು ಎಲ್ಲ ವ್ಯಕ್ತಿ ಜೋಡಿಸಲು ನಿಶ್ಚಯ ಮಾಡಿದ್ದೇವೆ. ಆದರೆ ಹಿಂದುಳಿದ ವರ್ಗಗಳ ನಾಯಕರ ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಈಶ್ವರಪ್ಪ ಗೈರು ಹಾಜರಾಗಿದ್ದಾರೆ.

ಇನ್ನು, ರಾಜ್ಯದ ಹಿಂದುಳಿದ ವರ್ಗಗಳ ನಾಯಕರ ಒಟ್ಟು ಗೂಡಿಸಲು ಕಾರ್ಯಕ್ರಮ ಮಾಡ್ತಿದ್ದೇವೆ. ವಿಶೇಷ ಅತಿಥಿಯಾಗಿ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಬರ್ತಿದ್ದಾರೆ. ಹಿಂದುಳಿದ ವರ್ಗಗಳ ರಾಷ್ಟ್ರೀಯ ಅಧ್ಯಕ್ಷರಾದ ಲಕ್ಷ್ಮಣ್, ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರು ಭಾಗಿಯಾಗ್ತಿದ್ದಾರೆ ಎಂದು ಹೇಳಿದರು.

Exit mobile version