Site icon PowerTV

ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಿಎಂ ಚಾಲನೆ..!

ಬೆಂಗಳೂರು: ದಿವಂಗತ ಅಪ್ಪು ನಟನೆಯ ಗಂಧದ ಗುಡಿ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಲು ಜನರು ಥಿಯೇಟರ್​ಗಳೊಗೆ ಮುಗಿಬಿದ್ದಿದ್ದಾರೆ.

ಕಂಠೀರವ ಸ್ಟೇಡಿಯಂನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಸುನೀಲ್ ಕುಮಾರ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಆರ್ ಅಶೋಕ್, ಸಂಸದ ಸದಾನಂದ ಗೌಡ, ಸಂಸದ ತೇಜಸ್ವಿ ಸೂರ್ಯ, ಸಂಸದ ಪಿಸಿ ಮೋಹನ್ ಹಾಗೂ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಸುಮಾರು 30 ಸಾವಿರ ಮಂದಿಯಿಂದ ಗಾಯನ ಮೂಡಿಬಂದಿದ್ದು, ಈ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದೆ. ಗಾಯಕರ ಕೈಯಲ್ಲಿ ಹಾರಾಡುತ್ತಿರುವ ಕನ್ನಡ ಬಾವುಟಗಳು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗುತಂದಿದೆ.

Exit mobile version