Monday, August 25, 2025
Google search engine
HomeUncategorizedಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲು ಬಿಜೆಪಿ ಹಿಂದೇಟು : ಅರವಿಂದ ಕೇಜ್ರಿವಾಲ್

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲು ಬಿಜೆಪಿ ಹಿಂದೇಟು : ಅರವಿಂದ ಕೇಜ್ರಿವಾಲ್

ಏಕರೂಪ ನಾಗರಿಕ ಸಂಹಿತೆ ಬೇಕು ಆದರೆ ಬಿಜೆಪಿ ಮೋಸ ಮಾಡಲು ಪ್ರಯತ್ನಿಸುತ್ತಿದೆ ಎಂದು ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಗುಜರಾತ್‌ನಲ್ಲಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಉದ್ದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೇಜ್ರಿವಾಲ್, ಆಡಳಿತ ಪಕ್ಷವು ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇದೇ ಭರವಸೆಯನ್ನು ನೀಡಿತ್ತು. ಆದರೆ ಚುನಾವಣೆಯಲ್ಲಿ ಗೆದ್ದ ನಂತರ ಅದನ್ನು ಕಾರ್ಯಗತಗೊಳಿಸಲಿಲ್ಲ ಎಂದು ಹೇಳಿದರು. ಅವರು ಉತ್ತರಾಖಂಡ ಚುನಾವಣೆಯಲ್ಲಿ ಗೆದ್ದ ನಂತರ ಸಮಿತಿಯನ್ನು ರಚಿಸಿದರು. ಈಗ ಅದು ಕಣ್ಮರೆಯಾಗಿದೆ ಎಂದು ಹೇಳಿದ ಕೇಜ್ರಿವಾಲ್, ಗುಜರಾತ್ ಚುನಾವಣೆಗೆ ಮೂರು ದಿನಗಳ ಮೊದಲು ಅವರು ಸಮಿತಿಯನ್ನು ರಚಿಸಿದ್ದಾರೆ. ಅದು ಚುನಾವಣೆಯ ನಂತರ ಕಣ್ಮರೆಯಾಗುತ್ತದೆ ಎಂದಿದ್ದಾರೆ.

ಭಾವನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕು. ಸಂವಿಧಾನದ 44 ನೇ ವಿಧಿಯು ಹಾಗೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಸ್ಪಷ್ಟವಾಗಿ ಹೇಳುತ್ತದೆ. ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಒಪ್ಪಿಗೆಯೊಂದಿಗೆ ಅದನ್ನು ಮಾಡಬೇಕು. ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇದನ್ನು ಏಕೆ ಜಾರಿಗೊಳಿಸುವುದಿಲ್ಲ?.ದೇಶದಾದ್ಯಂತ ಇದನ್ನು ಏಕೆ ಜಾರಿಗೊಳಿಸಬಾರದು. ಅವರು ಲೋಕಸಭೆ ಚುನಾವಣೆಗಾಗಿ ಕಾಯುತ್ತಿದ್ದಾರೆಯೇ? ಎಂದು ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments