Site icon PowerTV

ಖರ್ಗೆ ಆಗಮನಕ್ಕೆ ತಯಾರಾದ ಕೈ ಪಾಳಯ..!

ಬೆಂಗಳೂರು: ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮನ ಹಿನ್ನೆಲೆಯಲ್ಲಿ ರಾಜ್ಯ ಕೈ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ.

ಇನ್ನು ನವೆಂಬರ್ 6 ರಂದು ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮಲ್ಲಿಕಾರ್ಜುನ ಖರ್ಗೆ ರವರ ಆಗಮನಕ್ಕೆ ಅದ್ದೂರಿ ಸ್ವಾಗತ ನೀಡಲು ರಾಜ್ಯ ಕೈ ನಾಯಕರು ತಯರಾಗಿದ್ದಾರೆ. ಈಗಾಗಲೇ ಅಭಿನಂದನೆ ಕಾರ್ಯಕ್ರಮಕ್ಕೆ ಅದ್ದೂರಿ ಸ್ವಾಗತಕ್ಕೆ ಪೂರ್ವ ತಯಾರಿಗಾಗಿ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಎಚ್ ಮುನಿಯಪ್ಪ, ಎಂಬಿ ಪಾಟೀಲ್, ಈಶ್ವರ್ ಖಂಡ್ರೆ ಸೇರಿ ಪ್ರಮುಖ ನಾಯಕರು ಭಾಗಿಯಾಗಿದ್ದರು.

ಖರ್ಗೆ ರವರ ಅಭಿನಂದನ ಕಾರ್ಯಕ್ರಮದಲ್ಲಿ ರಾಮನಗರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಭಾಗದ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ. ಏರ್ಪೋರ್ಟ್ ನಿಂದ ಬೆಂಗಳೂರು ಪ್ಯಾಲೇಸ್ ವರೆಗೆ ಮೆರವಣಿಗೆ ಬಗ್ಗೆ ಚರ್ಚೆ ನಡೆದಿದ್ದು, ಬೆಂಗಳೂರು ಪ್ಯಾಲೇಸ್ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನವೆಂಬರ್ 6 ರಂದು ಅದ್ದೂರಿಯಾಗಿ ನಡೆಯಲಿದೆ.

Exit mobile version