Site icon PowerTV

ಹಾಸನದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಹಾಸನ : ನಾಡಿನೆಲ್ಲೆಡೆ 67ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು, ಹಾಸನದಲ್ಲೂ ಸಂಭ್ರಮ ಜೋರಾಗಿತ್ತು, ಹಾಸನ ನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ K.ಗೋಪಾಲಯ್ಯ ತಾಯಿ ಭುವನೇಶ್ವರಿ ಫೋಟೋಗೆ ಪುಪ್ಪಾರ್ಚನೆ ಮಾಡಿ ಧ್ವಜಾರೋಹಣ ನೆರವೇರಿಸಿ, ವಿವಿಧ ರಕ್ಷಣಾ ಪಡೆಗಳಿಂದ ಧ್ವಜ ವಂದನೆ ಸ್ವೀಕರಿಸಿದರು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು. ಕಾರ್ಯಕ್ರಮದಲ್ಲಿ ಶಾಸಕ ಪ್ರೀತಂಗೌಡ, ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್​​​​ ಭಾಗಿಯಾಗಿದ್ರು.

ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲೂ ಕನ್ನಡ ಹಬ್ಬವನ್ನು ಆಚರಿಸಲಾಯಿತು. ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ ಅವರು ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್​​​, SP ಸಂತೋಷ್ ಬಾಬು ಸೇರಿದಂತೆ ಹಲವರು ಭಾಗಿಯಾಗಿ ವಿಜೃಂಭಣೆಯಿಂದ ಕನ್ನಡ ಹಬ್ಬವನ್ನು ಆಚರಿಸಿದರು.

Exit mobile version