Tuesday, September 9, 2025
HomeUncategorizedಪುನೀತ್​ ರಾಜ್​ಕುಮಾರ್​ ಸ್ಮರಿಸಿದ ಡಾ. ವೀರೇಂದ್ರ ಹೆಗ್ಗಡೆ

ಪುನೀತ್​ ರಾಜ್​ಕುಮಾರ್​ ಸ್ಮರಿಸಿದ ಡಾ. ವೀರೇಂದ್ರ ಹೆಗ್ಗಡೆ

ಮಂಗಳೂರು: ಇಂದು ಮರಣೋತ್ತರವಾಗಿ ದಿವಂಗತ ಪುನೀತ್​ ರಾಜ್​ಕುಮಾರ್​ ಅವರ ಪರವಾಗಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ನೀಡಿರುವ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಿತು.

ಇದಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಸುದ್ದಿಗಾರರೊಂದಿಗೆ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ದಿ. ಪುನೀತ್‌ ರಾಜ್‌ ಕುಮಾರ್‌ ಅವರನ್ನು ನಾನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ. ಯಾಕಂದ್ರೆ ಅವರ ತಂದೆ ಡಾ. ರಾಜ್‌ ಕುಮಾರ್‌ ಅವರು ನನಗೆ ಅತ್ಯಂತ ಪ್ರೀತಿ ಪಾತ್ರರಾದವರು. ಕ್ಷೇತ್ರದ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದರು. ಅವರ ಪುತ್ರನಾಗಿರುವ ಪುನೀತ್‌ ರಾಜಕುಮಾರ್‌ ಅವರು ವೈಯಕ್ತಿವಾಗಿ ವ್ಯಕ್ತಿತ್ವ, ನಟನೆ ಹಾಗು. ಸ್ವಭಾವದಿಂದಾಗಿ ಎಲ್ಲರ ಪ್ರೀತಿ ಪಾತ್ರನಾಗಿ ಅಚ್ಚುಮೆಚ್ಚಿನ ವ್ಯಕ್ತಿಯಾಗಿ ಬೆಳೆದವರು ಎಂದರು.

ಅಪ್ಪು ಅವರ ಸಾವನ್ನು ಇಂದಿಗೂ ನಮಗೆ ಅರಗಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಪುನೀತ್‌ ಅವರನ್ನು ಸ್ಮರಿಸುತ್ತ ಅವರಿಗೆ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದೇನೆ. ಇನ್ನು ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಅಪ್ಪು ಅವರ ಸಾಧನೆ ಮುಂದೆ ಬರುವ ಕಲಾವಿದರಿಗೆ ಮಾದರಿಯಾಗಲಿ ಎಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

RELATED ARTICLES
- Advertisment -
Google search engine

Most Popular

Recent Comments