Site icon PowerTV

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ; ಅಪ್ರಾಪ್ತ ಬಾಲಕನ ಬಂಧನ

ಕಲಬುರಗಿ: ಜಿಲ್ಲೆಯ ಆಳಂದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಅಪರಾಧ ಕೊಲೆ ಪ್ರಕರಣ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಆರೋಪಿಯನ್ನು ಕಲಬುರಗಿ ಪೋಲಿಸರು ಬಂಧಿಸಿದ್ದಾರೆ.

ಕೃತ್ಯ ಎಸಗಿದ ಬಂಧಿತ ಆರೋಪಿ ಕೂಡ ಅಪ್ರಾಪ್ತ ಬಾಲಕ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ತಂಡ ರಚಿಸಿದ ಪೋಲಿಸರು ಮಿಂಚಿನ ಕಾರ್ಯಚರಣೆ ನಡೆಸಿ ಕೃತ್ಯ ನಡೆದ 24ಗಂಟೆಯಲ್ಲೆ ಬಾಲಕ ಆರೋಪಿಯನ್ನ ಹೆಡೆಮೂರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ನಿನ್ನೆ ಮಧ್ಯಾಹ್ನ 3ರಿಂದ 4 ಗಂಟೆಯ ಅವಧಿಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯಿಂದ ಬರ್ಹಿದೆಸೆಗೆ ಹೋಗಿದ್ದಾಗ ಕಾಮುಕನೋರ್ವ ಕಬ್ಬಿನ ಗದ್ದೆಯಲ್ಲಿ ಎಳೆದ್ಯೋಯ್ದು ಲೈಂಗಿಕ ಅಪರಾಧವೆಸಗಿ ಬಾಲಕಿಯ ಎದೆಗೆ ಕಲ್ಲಿನಿಂದ ಜಜ್ಜಿ ವೆಲ್ ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆಗೈದು ಪರಾರಿಯಾಗಿದ್ದ, ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಆಳಂದ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ.

Exit mobile version