Site icon PowerTV

ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆ ಬಿಜೆಪಿ ಪಾಳಯದಲ್ಲಿ ಮಹತ್ವದ ಸಭೆ

ಬೆಂಗಳೂರು: ನವೆಂಬರ್ 11 ರಂದು ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆ, ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಹತ್ವದ ಸಭೆ ನಡೆದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು,  ಸಭೆಯಲ್ಲಿ ಬೆಂಗಳೂರಿನ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಬಿಜೆಪಿ ಜಿಲ್ಲಾಧ್ಯಕ್ಷರು ಭಾಗಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ಹದಿಮೂರು ಜಿಲ್ಲೆಗಳ ಬಿಜೆಪಿ ಜನಪ್ರತಿನಿಧಿಗಳಿಗೆ ಈಗಾಗಲೇ ಸಭೆಗೆ ಆಹ್ವಾನ ನೀಡಲಾಗಿದೆ.

ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ಪಾಲ್ಗೊಳ್ಳುವ ಸಮಾವೇಶದ ಸಿದ್ಧತೆ ಕುರಿತು ಪೂರ್ವಭಾವಿ ಸಭೆ ಇದಾಗಿದೆ.

Exit mobile version