Site icon PowerTV

ನ. 7 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಡಿ.ಕೆ ಶಿವಕುಮಾರ್​ಗೆ ಇಡಿ ಸಮನ್ಸ್​.!

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ನವೆಂಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ ಸಮನ್ಸ್ ನೀಡಿದೆ.

ಕಳೆದ ತಿಂಗಳು ‘ಭಾರತ್ ಜೋಡೋ ಯಾತ್ರೆ’ ಕರ್ನಾಟಕದ ಮೂಲಕ ಹಾದು ಹೋಗುತ್ತಿದ್ದಾಗ ಇಡಿ ನೋಟಿಸ್​ ನೀಡಿ ವಿಚಾರಣೆಗೆ ಕರೆಸಿಕೊಂಡಿತ್ತು. ಯಾವ ಪ್ರಕರಣದಲ್ಲಿ ಇಡಿ ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದೆ ಎಂಬುದು ಸ್ಪಷ್ಟವಾಗಿಲ್ಲ.

ಕಳೆದ ತಿಂಗಳು, ಯಂಗ್ ಇಂಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಅವರನ್ನು ವಿಚಾರಣೆಗೆ ಒಳಪಡಿಸಿತು, ಇದರಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನೂ ಪ್ರಶ್ನಿಸಲಾಯಿತು.

ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ. 6 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರಿಗೆ ಅದ್ಧೂರಿ ಸ್ವಾಗತ ನೀಡಲು ಭರ್ಜರಿ ಸಿದ್ಧತೆ ನಡೆಸುತ್ತಿದ್ದ ಕೆಪಿಸಿಸಿ ಅಧ್ಯಕ್ಷರಿಗೆ ಈಗ ಇಡಿ ನೋಟಿಸ್ ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ.

Exit mobile version