Site icon PowerTV

ಕೆಂಪೇಗೌಡ ಬಡಾವಣೆ ಕಾಮಗಾರಿ ವಿಳಂಬಕ್ಕೆ ಎಸ್​.ಆರ್​ ವಿಶ್ವನಾಥ್​ ಗರಂ

ಬೆಂಗಳೂರು: ಬಿಡಿಎ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನ ಸಮರ್ಪಕವಾಗಿ ನಿರ್ಮಾಣ ಮಾಡಿಲ್ಲ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸೇರಿಕೊಂಡು ಲೇಔಟ್ ನಿರ್ಮಾಣ ಹಾಳು ಮಾಡ್ಬಿಟ್ಟಿದ್ದಾರೆ ಎಂದು ಬಿಡಿಎ ಅಧ್ಯಕ್ಷ ಎಸ್​.ಆರ್​ ವಿಶ್ವನಾಥ್​ ಅವರು ಗರಂ ಆಗಿದ್ದಾರೆ.

ಇಂದು ಕೆಂಪೇಗೌಡ ಬಡಾವಣೆಗೆ ಬಿಡಿಎ ಅಧ್ಯಕ್ಷ ವಿಶ್ವನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು‌. ಬಳಿಕ ಈ ವೇಳೆ ಕಾಮಗಾರಿಯನ್ನು ವಿಳಂಬ ಮಾಡುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳನ್ನು ತರಾಟೆಗೆ ತೆಗೆದುಕೊಂಡು, ಯಾವುದೇ ಕಾರಣಕ್ಕೂ ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿ ವಿಳಂಬವಾಗಬಾರದು ಎಂದು ಎಚ್ಚರಿಸಿದರು.

ಬಡಾವಣೆಯ ವಿವಿಧೆಡೆಯಲ್ಲಿ ನಿವೇಶನ ಅಭಿವೃದ್ಧಿ, ರಸ್ತೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಮಾಡಿ, ಬಿಡಿಎ ಭೂಮಿಯನ್ನು ನೀಡಿದ್ದರೂ ಕಾಮಗಾರಿಯನ್ನು ಕೈಗೊಳ್ಳುವಲ್ಲಿ ಗುತ್ತಿಗೆದಾರರು ವಿಫಲರಾಗಿದ್ದಾರೆ ಎಂದು ಬಿಡಿಎ ಅಧ್ಯಕ್ಷ ಕಿಡಿಕಾರಿದರು.

ಯಂತ್ರೋಪಕರಣಗಳನ್ನು ಬಳಸಿ ಕೂಡಲೇ ಕಾಮಗಾರಿಗಳನ್ನು ಕೈಗೊಳ್ಳಬೇಕು. ಇದರ ಜವಾಬ್ದಾರಿಯನ್ನು ಸಂಬಂಧಿಸಿದ ಎಂಜಿನಿಯರ್​ಗಳು ವಹಿಸಿಕೊಳ್ಳಬೇಕು. ಇದಕ್ಕೆ ವಿಫಲರಾದರೆ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯನ್ನ ವಿಶ್ವನಾಥ್​ ಅವರು ನೀಡಿದರು.

Exit mobile version