Friday, August 29, 2025
HomeUncategorizedಗುಜರಾತ್‌ ಚುನಾವಣಾ ಕಣಕ್ಕೆ AAP ಕಲಿ ಎಂಟ್ರಿ

ಗುಜರಾತ್‌ ಚುನಾವಣಾ ಕಣಕ್ಕೆ AAP ಕಲಿ ಎಂಟ್ರಿ

ಗುಜರಾತ್​ : ಗುಜರಾತ್ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಈ ಬಾರಿ ಎಎಪಿ ಸ್ಪರ್ಧೆಯೊಂದಿಗೆ ತೀವ್ರ ಕುತೂಹಲ ಮೂಡಿಸಿದೆ. ಸುಮಾರು 27 ವರ್ಷಗಳಿಂದಲೂ ಇಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿದ್ದು, ಅಧಿಕಾರ ಅನುಭವಿಸುತ್ತಾ ಬಂದಿದ್ದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಚುನಾವಣೆ ಪ್ರತಿಷ್ಠೆಯಾಗಿದ್ದು, ಈ ಬಾರಿಯೂ ಚುನಾವಣೆಗೆದ್ದು ಅಧಿಕಾರ ಉಳಿಸಿಕೊಳ್ಳುವ ಸಂಕಲ್ಪ ಮಾಡಿದ್ದಾರೆ. ಆದರೆ, ಎಎಪಿ ಸ್ಪರ್ಧೆಯೊಂದಿಗೆ ಅದು ಅಂದುಕೊಂಡಷ್ಟು ಸುಲಭವಾಗಿಲ್ಲ. ಆಮ್ ಆದ್ಮಿ ಪಕ್ಷ ಗುಜರಾತ್ ನಲ್ಲಿ ಪರಿಣಾಮ ಬೀರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ಗೆ ಸಡ್ಡು ಹೊಡೆದಿರುವ ಆಮ್ ಆದ್ಮಿ ಪಕ್ಷ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ಆಪ್ ಅಧಿಕಾರಕ್ಕೆ ಬಂದರೆ ಮಾಜಿ ಪತ್ರಕರ್ತ ಈಸುದನ್ ಗಧ್ವಿ ಅವರು ಗುಜರಾತ್ ಸಿಎಂ ಆಗಲಿದ್ದಾರೆ ಎಂದು ಹೇಳಿದೆ.

ಬಿಜೆಪಿ 122 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ, ಸಾಂಪ್ರಾದಾಯಿಕ ಕಾಂಗ್ರೆಸ್ ಮತಗಳನ್ನು ಎಎಪಿ ಸೆಳೆದುಕೊಂಡರೆ ಮಾತ್ರ ಇದು ಸಾಧ್ಯ. ಇಲ್ಲವಾದರೆ ಅದು ಕಷ್ಟಸಾಧ್ಯ ಎನ್ನಲಾಗುತ್ತಿದೆ. ಬಿಜೆಪಿ ಕೂಡಾ ಎಎಪಿಯನ್ನು ಹಗುರವಾಗಿ ಪರಿಗಣಿಸಿಲ್ಲ. ಮೋದಿ ಮತ್ತು ಅಮಿತ್ ಶಾ ಕೋಟ್ಯಂತರ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವುದರೊಂದಿಗೆ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಎಎಪಿ ಮತಗಳಿಕೆಯಲ್ಲಿ ಶೇ. 24 ಮೀರಬಾರದು ಎಂದು ಅಮಿತ್ ಶಾ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.

ಗುಜರಾತ್‌ನಲ್ಲಿ ಬಿಜೆಪಿ ಈ ಬಾರಿಯೂ ಅಧಿಕಾರ ಹಿಡಿಯಲಿದೆ ಎಂದು ಕೆಲ ಸಮೀಕ್ಷೆಗಳು ಹೇಳ್ತಿವೆ..
ಆದರೆ ಆಪ್‌ ಮೂರನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎನ್ನಲಾಗ್ತಿದೆ. ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 125- 130 ಸ್ಥಾನವನ್ನು ಗೆಲ್ಲುವ ಮೂಲಕ ಸತತ 7ನೇ ಬಾರಿ ಅಧಿಕಾರಕ್ಕೆ ಏರಲಿದೆ ಎನ್ನಲಾಗ್ತಿದೆ. ಕಾಂಗ್ರೆಸ್‌ 29-33, ಆಪ್‌ 20-24, ಇತರರು 1-3 ಸ್ಥಾನಗಳನ್ನು ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ. ಅಖಾಡದಲ್ಲಿ ಎಲ್ಲರೂ ಯುದ್ಧ ಮಾಡಲೇ ಬೇಕು. ಹಾಗಾಗಿ, ಸೋಲು ಗೆಲುವು ಲೆಕ್ಕಾಚಾರದಲ್ಲಿ ಆಮ್‌ ಆದ್ಮಿ ಫೈಟ್‌ ಮಾಡ್ತಾನೆ ಅನ್ನೋದು ಅಷ್ಟೇ ಸತ್ಯ.

RELATED ARTICLES
- Advertisment -
Google search engine

Most Popular

Recent Comments