Friday, August 29, 2025
HomeUncategorized35ನೇ ವಸಂತಕ್ಕೆ ಕಾಲಿಟ್ಟ ಕೊಹ್ಲಿ

35ನೇ ವಸಂತಕ್ಕೆ ಕಾಲಿಟ್ಟ ಕೊಹ್ಲಿ

ಸಮಕಾಲೀನ ಕ್ರಿಕೆಟ್‌ ಜಗತ್ತಿನ ಅತ್ಯಂತ ಯಶಸ್ವಿ ಬ್ಯಾಟರ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಇಂದು 35ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಪತಿ ಕೊಹ್ಲಿ ಬರ್ತ್ ಡೇಗೆ ಅನುಷ್ಕಾ ಶರ್ಮಾ ಹುಟ್ಟು ಹಬ್ಬದ ಶುಭಕೋರಿದ್ದಾರೆ. ತಮ್ಮ ಜೀವನದ ಆರಂಭಿಕ ಕಾಲಘಟ್ಟದಲ್ಲಿ ಸಾಕಷ್ಟು ವೈಫಲ್ಯಗಳನ್ನು ಎದುರಿಸಿ ಇಂದು ವಿಶ್ವದ ಶ್ರೇಷ್ಠ ಕ್ರಿಕೆಟಿಗನಾಗಿ ಗುರುತಿಸಿಕೊಂಡಿರುವ ಕಿಂಗ್ ಕೊಹ್ಲಿಗೆ ಜನ್ಮದಿನದ ಪ್ರಯುಕ್ತ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಕಠಿಣ ಪರಿಶ್ರಮ, ಕೆಚ್ಚೆದೆಯ ನಡೆ ಅವರನ್ನು ವಿಶ್ವದ ಅತ್ಯುತ್ತಮ ಬ್ಯಾಟರ್​ಗಳ ಸಾಲಿನಲ್ಲಿ ತಂದು ನಿಲ್ಲಿಸಿದೆ.

ಕಳೆದ ಕೆಲವು ವರ್ಷಗಳಿಂದ ಕೊಹ್ಲಿ ಬ್ಯಾಟ್​ನಿಂದ ನಿರೀಕ್ಷೆಗೆ ತಕ್ಕಂತೆ ರನ್ ಬರುತ್ತಿರಲಿಲ್ಲ. ಆದರೆ, ಈ ವರ್ಷ ಕೊಹ್ಲಿ ತಮ್ಮ ಹಳೆಯ ಖದರ್​​ಗೆ ಮರಳಿದ್ದು ಶತಕದ ಬರ ನೀಗಿಸುವ ಜೊತೆ ಫಾರ್ಮ್​ಗೆ ಬಂದು ಸದ್ಯ ಸಾಗುತ್ತಿರುವ ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

ನವೆಂಬರ್ 5, 1988 ರಂದು ನವದೆಹಲಿಯಲ್ಲಿ ಜನಿಸಿದ ವಿರಾಟ್ ಕೊಹ್ಲಿ ಅವರ ತಂದೆ ಪ್ರೇಮ್ ಕೊಹ್ಲಿ ಮತ್ತು ತಾಯಿ ಸರೋಜ್ ಕೊಹ್ಲಿ. ಕೊಹ್ಲಿ ಪ್ರಾರಂಭಿಕ ದಿನಗಳಲ್ಲಿ ಕೋಚಿಂಗ್ ರಾಜ್ಕುಮಾರ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದರು. 2008ರಲ್ಲಿ 19 ವರ್ಷದ ವಯೋಮಿತಿಯ ವಿಶ್ವಕಪ್​ನಲ್ಲಿ ತನ್ನ ನಾಯಕತ್ವದಲ್ಲಿ ಭಾರತವನ್ನು ವಿಶ್ವ ಚಾಂಪಿಯನ್ ಮಾಡಿಸಿದ ಕೊಹ್ಲಿ ನಂತರ ನೇರವಾಗಿ ರಾಷ್ಟ್ರೀಯ ತಂಡಕ್ಕೆ ಎಂಟ್ರಿ ನೀಡಿದ್ದರು.

RELATED ARTICLES
- Advertisment -
Google search engine

Most Popular

Recent Comments