Site icon PowerTV

ಜಮೀನಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಮೂವರ ಧಾರುಣ ಸಾವು.!

ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಅಪ್ಪ, ಮಗ, ಕೂಲಿ ಕಾರ್ಮಿಕ ಧಾರುಣ ಸಾವಿಗೀಡಾದ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದ ಬಳಿ ತಮ್ಮ ಜಮೀನಿನ‌ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಕೆಳಕ್ಕೆ ಬಿದ್ದಿತ್ತು. ಇದನ್ನ ಗಮನಿಸಿದ ರೈತರು ಇಂದು ಬೆಳಿಗ್ಗೆ ಎಂದಿನಂತೆ ಭತ್ತದ ಗದ್ದೆಗೆ ಔಷಧಿ ಸಿಂಪಡಿಸಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ರಾಚೇಗೌಡ (60), ಹರೀಶ್ (35) ಹಾಗೂ ಕುಮಾರಸ್ವಾಮಿ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ತಿ. ನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version